Blog

ದಾವಣಗೆರೆ: ಮೈಕ್ರೋಬಿ ಫೌಂಡೇಶನ್ ವತಿಯಿಂದ ಮಣ್ಣು ಜೀವಿಸಲಿ ಅಭಿಯಾನದಡಿ ಹಮ್ಮಿಕೊಳ್ಳಲಾಗಿದ್ದ ಸಾವಯವ ಕೃಷಿಕರ ಸಮಾವೇಶದಲ್ಲಿ ನಾಡಿನ ಖ್ಯಾತ ಸಾವಯವ ಕೃಷಿ ತಜ್ಞರಾದ ಡಾ.ಕೆ.ಆರ್.ಹುಲ್ಲುನಾಚೆಗೌಡರು ಕೃಷಿಕ ವರ್ಗದ ಜ್ವಲಂತ ಸಮಸ್ಯೆಗಳಿಗೆ ಪರಿಹಾರದ ಮಾರ್ಗ ತೋರಿದರು.

ರಾಸಾಯನಿಕ ಕೃಷಿಯಿಂದ ಆಗುತ್ತಿರುವ ಅನಾಹುತಗಳ ಬಗ್ಗೆ ಎಳೆಎಳೆಯಾಗಿ ವಿವರಿಸಿದ ಡಾ.ಕೆ.ಆರ್.ಹುಲ್ಲುನಾಚೆಗೌಡರು, ಸಾವಯವ ಕೃಷಿಯಿಂದ ಮಾತ್ರ ಮಣ್ಣು ಹಾಗೂ ಮಣ್ಣಿನ ಮಕ್ಕಳು ಉಳಿಯಲು ಸಾಧ್ಯವೆಂದು ಪ್ರತಿಪಾದಿಸಿದರು. ರೈತರ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ಒದಗಿಸುವ ಧಾತು ಆಪ್ ಬಗ್ಗೆ ಸಮಗ್ರ ಮಾಹಿತಿ ನೀಡಿದ ಅವರು, ಧಾತು ಆಪ್ ನಿಂದ ಹೇಗೆ ಮಧ್ಯವರ್ತಿಗಳ ಹಾವಳಿ ತಪ್ಪಲಿದೆ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ದಾವಣಗೆರೆ, ವಿಜಯನಗರ, ಹಾವೇರಿ, ಶಿವಮೊಗ್ಗ ಜಿಲ್ಲೆಗಳ ಅನ್ನದಾತ ಪ್ರಭುಗಳಿಗೆ ಸಾವಯವ ಕೃಷಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪರಮಪೂಜ್ಯ ಶ್ರೀ ಶ್ರೀ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಸಾನಿಧ್ಯ ವಹಿಸಿದ್ದರು.  ಮೈಕ್ರೋಬಿ ಫೌಂಡೇಶನ್ ನ ಪ್ರಮುಖರು, ಡಾ.ಸಾಯಿಲ್ ವಿತರಕರು ಉಪಸ್ಥಿತರಿದ್ದರು.

 




Blog




Home    |   About Us    |   Contact    |   
microbi.tv | Powered by Ocat Online Advertising Service in India