Blog

ಬೆಂಗಳೂರುರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿಇಲಾಖೆ ಮುಂದಾಗಿದ್ದು,  ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್ನಲ್ಲಿ ಘೋಷಿಸಿದಂತೆ " ರೈತಶಕ್ತಿ ಯೋಜನೆರೂಪಿಸಿದೆ.


    ರೈತರಿಗೆ  ಕೃಷಿ  ಯಾಂತ್ರೀಕರಣವು ಡೀಸೆಲ್‌ ಇಂಧನದ  ಮೇಲೆ ಬಹುತೇಕ‌ ಅವಲಂಬಿತವಾಗಿದೆಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ  2022 - 23 ನೇಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ   ರೈತ ಶಕ್ತಿ ಯೋಜನೆ ರೂಪಿತವಾಗಿದೆ. ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ  ಇಂಧನದ ವೆಚ್ಚದ ಹೊರೆಯನ್ನು ಕಡಿಮೆ ಮಾಡಲು ರಾಜ್ಯದಲ್ಲಿಯೇ  ಮೊದಲ ಬಾರಿಗೆ  ರೈತ ಶಕ್ತಿ ಯೋಜನೆ ಅನುಷ್ಠಾನವಾಗುತ್ತಿದೆ.


ರೈತ ಶಕ್ತಿ ಯೋಜನೆಯಡಿ ಪ್ರತಿ ಎಕರೆಗೆ ರೂ . 250 ಗಳಂತೆ ಗರಿಷ್ಠ 5 ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡಲಾಗುವುದು. ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದ್ದು,  ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS (Farmer Registration and Unified beneficiary Information system) ಪೋರ್ಟಲ್‌‌  ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆಅದೇ ರೀತಿಯಲ್ಲಿ FRUITS ಪೋರ್ಟಲ್ನಲ್ಲಿ  ನೋಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿಯೋಜನೆಯನ್ನು , ಸಹ ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ (DBT) ಮೂಲಕವೇ ಯೋಜನೆ ಅನುಷ್ಠಾನ ಮಾಡಲಾಗುವುದು


ನಗದು ಯೋಜನೆಯ FRUITS ಪೋರ್ಟಲ್ನಲ್ಲಿ ನೋಂದಣಿಗೊಂಡ ರಾಜ್ಯದ ಎಲ್ಲಾ ರೈತರು  ಯೋಜನೆಯ ಫಲಾನುಭವಿಗಳಾಗಿರುತ್ತಾರೆ.  ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿರುವುದರಿಂದ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲದಾಖಲೆಗಳ ಪರಿಶೀಲನೆಯನ್ನು ಸರ್ಕಾರದ FRUITS ಪೋರ್ಟಲ್ ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡಲಾಗುವುದು . FRUITS ಪೋರ್ಟಲ್ನಲ್ಲಿ ನಮೂದಿಸಲಾದ ಹಿಡುವಳಿಯ ವಿಸ್ತೀರ್ಣದ ಆಧಾರದ ಮೇಲೆ ರೈತರಿಗೆ ಡೀಸೆಲ್‌ ಸಹಾಯಧನವನ್ನು ನೇರ ನಗದು ವರ್ಗಾವಣೆ (DBT) ಮೂಲಕ  ರೈತರ  ಖಾತೆಗೆ ವರ್ಗಾಯಿಸಲಾಗುವುದು.


FRUITS ತಂತ್ರಾಂಶದಲ್ಲಿ ನೋಂದಣಿಗೊಂಡ ರೈತರು ಹೊಂದಿರುವ ಭೂಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬರೈತರಿಗೆ ಪ್ರತಿ ಎಕರೆಗೆ ರೂ .250 ರಂತೆ ಗರಿಷ್ಠ 5 ಎಕರೆಗೆರೂ .1250  ರವರಗೆ ಡೀಸೆಲ್ ಸಹಾಯಧನವನ್ನುಒದಗಿಸಲಾಗುವುದು. ಅರ್ಹ ರೈತರಿಗೆ ಡೀಸಲ್ ಹಾಯಧನದ ಮೊತ್ತವನ್ನು ಸರ್ಕಾರದ DBT ವೋರ್ಟಲ್ ಮೂಲಕ ಆಧಾರದ ಸೀಡೆಡ್ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಗೆ ವರ್ಷಕ್ಕೊಮ್ಮೆ ವರ್ಗಾಯಿಸಲಾಗುವುದು.


Super crop Sugarcane 100 ton yield technique | ಸಾವಯವ ಕೃಷಿಯಲ್ಲಿ 100 ಟನ್ ಕಬ್ಬು #organicfarming

 

https://www.youtube.com/watch?v=ZjElTIEcmDI&t=1s

 

ಸಾವಯವ ಕೃಷಿ ಮಾಹಿತಿಗಾಗಿ ಸಂಪರ್ಕಿಸಿ 9099262233

ನಿಮ್ಮ ಮಣ್ಣಿನ ಉಚಿತ ಪರೀಕ್ಷೆಗಾಗಿ ಧಾತು ಆಪ್ ಡೌನ್ ಲೋಡ್ ಗೆ ಕೆಳಕಂಡ ಲಿಂಕ್ ಕ್ಲಿಕ್ ಮಾಡಿ:

https://play.google.com/store/apps/details?id=com.microbitech.dhatu&fbclid=IwAR3G5jmGg24xxo4UjIhbtT9krNmE3ukRkTHAiR_Vui0v7tsCnQli6ZP7-fE

► Microbi Agrotech Website: http://www.microbiagro.com

► Subscribe to Microbi Agrotech: https://youtube.com/c/MICROBIAGROTECHPVTLTDKANNADA

► Like us on Facebook: https://www.facebook.com/microbiagrotech/

 




Blog




Home    |   About Us    |   Contact    |   
microbi.tv | Powered by Ocat Web Promotion Service in India | Promoting Websites through Ocat Content Marketing